ಕುಂದಾಪುರ(ನ,14): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಅವರ ಕೀರ್ತನೆಗಳನ್ನು ಭಜಿಸಿ ಕನಕದಾಸ ಜಯಂತಿಯನ್ನು ನ.11 ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾದ ವಿ. ಕೆ. ಆರ್. ಪ್ರೌಢ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಪ್ರಕಾಶ ಬಿಲ್ಲವರವರು ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜೀವನ ಮೌಲ್ಯಗಳ ಅರಿವು ಮೂಡಿಸಿ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಕೊಡುಗೆಯನ್ನು ನೀಡಿದ ದಾಸ ಶ್ರೇಷ್ಠರು. ಇವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂಬುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ವಹಿಸಿಕೊಂಡಿದ್ದರು. ಉಪಪ್ರಾಂಶುಪಾಲರು ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ ಆಚಾರ್ ಸಾಸ್ತಾನ ಹಾಗೂ ಸಹಾಯಕ ಮುಖ್ಯ ಶಿಕ್ಷಕಿಯಾದ ಕವಿತಾ ಭಟ್ ಮತ್ತು ಇತರ ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.