ಅoಪಾರು( ನ,15): ಬಡ ಕುಟುಂಬದ ವನಜ ಪೂಜಾರಿ ಇವರು ಮನೆಯನ್ನು ಕಟ್ಟಬೇಕು ಎಂದು ನಿರ್ಧರಿಸಿದ ಆ ಸಮಯದಲ್ಲಿ ತನ್ನ ಗಂಡನನ್ನು ಮಾರಕ ಕ್ಯಾನ್ಸರ್ ಖಾಯಿಲೆಯಿಂದ ಕಳೆದುಕೊಂಡಾಗ ಅವರೊಂದಿಗೆ ಇದ್ದಿದ್ದು ಎಂಡೋಸಲ್ಫನ್ ಪೀಡಿತ ಬುದ್ಧಿಮಾಂದ್ಯ ಮಗ. ಮಗನನ್ನು ಬಿಟ್ಟು ಕೂಲಿಗೂ ಹೋಗಲಾಗದ ಪರಿಸ್ಥಿತಿ. ಇವರ ಮನೆ ನಿರ್ಮಾಣ ಕಾರ್ಯ ಪೂರ್ಣ ಗೊಳಿಸಬೇಕೆಂದು ಅನೇಕರು ಪ್ರಯತ್ನ ಪಟ್ಟರೂ ಕೂಡ ಸಾಧ್ಯವಾಗದಿದ್ದಾಗ ಇವರು ಸಂಪರ್ಕಿಸಿದ್ದು ಸೇವಾ ಚೇತನ ಟ್ರಸ್ಟ್ .
ಅವರ ಕಷ್ಟವನ್ನು ಮನಗಂಡು ನಮ್ಮೂರ ಸಂಭ್ರಮ ದ ಸೇವಾ ಚೇತನ ಟ್ರಸ್ಟ್ ಮೂಲಕ ಶೀಘ್ರ ಪರಿಹಾರ ಕೊಡಬೇಕು ಎಂಬ ಪಣ ತೊಟ್ಟು ಕೇವಲ 6 ತಿಂಗಳಲ್ಲಿ ಮನೆಯ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಅಯೋಧ್ಯೆ ಹೆಸರಿನ ಮನೆಯ ಕೀ ಹಸ್ತಾಂತರವನ್ನು ಬೈoದೂರು ಕ್ಷೇತ್ರದ ಶಾಸಕರಾದ ಶ್ರೀ ಸುಕುಮಾರ ಶೆಟ್ಟಿ ಯವರ ಮೂಲಕ ನ.13 ರ ರ ಭಾನುವಾರದಂದು ನೆರವೇರಿಸಿದರು.
ಸೇವಾ ಚೇತನ ಟ್ರಸ್ಟ್ ನ ಗೌರವಾಧ್ಯಕ್ಷರಾದ ಕೊಲ್ಲೂರು ಶ್ರೀ ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಚಂದ್ರ ಶೇಖರ ಶೆಟ್ಟಿ ಕೆರಾಡಿ, ಅಂಪಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಲಕ್ಷ್ಮಿ ಶೆಟ್ಟಿ, ಬೈಂದೂರು ಬಿ ಜೆ ಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ ಶೆಟ್ಟಿ, ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು, ಗ್ರಾಮಸ್ಥರು, ಈ ಶುಭ ಸಮಾರಂಭದಲ್ಲಿ ಸಾಕ್ಷಿಯಾಗಿದ್ದರು.
ಸೇವಾ ಚೇತನ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ, ಅಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಶೆಟ್ಟಿ, ಹಾಗೂ ಸೇವಾ ಚೇತನ ಟ್ರಸ್ಟ್ ನ ಎಲ್ಲಾ ಸದಸ್ಯರು ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.