ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯದ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ”ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ನಮ್ಮ ಅರಿವು” ವಿಷಯದ ಕುರಿತಂತೆ ವಿದ್ಯಾರ್ಥಿಗಳು ಎ 4 ಅಳತೆಯ ಕಾಗದದಲ್ಲಿ ನಾಲ್ಕು ಪುಟ ಗಳಿಗೆ ಮೀರದಂತೆ ಕಾಗದದ ಒಂದೇ ಮಗ್ಗುಲಿನಲ್ಲಿ ಕನ್ನಡದ ಹಸ್ತಾಕ್ಷರದಲ್ಲಿ ಬರೆದು ಕಾಲೇಜಿನ ಮುಖ್ಯಸ್ಥರ ದೃಢೀಕರಣದೊಂದಿಗೆ 05-12- 2022 ರ ಒಳಗೆ ತಲುಪುವಂತೆ ಕೆಳಗೆ ತಿಳಿಸಿದ ವಿಳಾಸಕ್ಕೆ ಸಾಮಾನ್ಯ ಅಂಚೆಯ ಮೂಲಕ ಅಥವಾ ಖುದ್ದಾಗಿ ತಲುಪಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನಗಳಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಇ- ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಪ್ರಬಂಧವನ್ನು ಗೋಪಾಲ ಪೂಜಾರಿ ಅಧ್ಯಕ್ಷರು ಬಿಲ್ಲವರ ಹಿತರಕ್ಷಣಾ ವೇದಿಕೆ ಬಸ್ ನಿಲ್ದಾಣ ಸಮೀಪ ಗಂಗೊಳ್ಳಿ, ಕುಂದಾಪುರ ತಾಲೂಕು ಉಡುಪಿ ಜಿಲ್ಲೆ 576216 ಈ ವಿಳಾಸಕ್ಕೆ 05-12- 2022 ರ ಒಳಗೆ ತಲುಪುವಂತೆ ಸಾಮಾನ್ಯ ಅಂಚೆಯ ಮೂಲಕ ಅಥವಾ ಖುದ್ದಾಗಿ ತಲುಪಿಸಬೇಕು. ಈ ಸ್ಪರ್ಧೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9964794645, 9242127307 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದಾಗಿದೆ.