ಕುಂದಾಪುರ (ನ,5 ) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ನ .16 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಡುಪಿಯ ಡಿಸ್ಟ್ರಿಕ್ಟ್ ಸ್ಕಿಲ್ ಡೆವಲಪ್ಮೆಂಟ್ನ ಸಹಾಯಕ ನಿರ್ದೇಶಕರಾದ ಶ್ರೀ ಅರುಣ್ ಬಿ. ಅವರು ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಉಡುಪಿಯ ಡಿಸ್ಟ್ರಿಕ್ಟ್ ಸ್ಕಿಲ್ ಡೆವಲಪ್ಮೆಂಟ್ನ ಡಿಸ್ಟ್ರಿಕ್ಟ್ ಕೌನ್ಸಿಲರ್ರಾದ ಶ್ರೀಮತಿ ಸಂಧ್ಯಾ ರಾಣಿ, ಕುಂದಾಪುರದ ಸೃಷ್ಠಿ ಇನ್ಫೋಟೆಕ್ನ ಮ್ಯಾನೇಜಿಂಗ್ ಡೈರೆಕ್ಟರ್ರಾದ ಶ್ರೀ ಹರ್ಷವರ್ಧನ್ ಶೆಟ್ಟಿ, ಶ್ರೀ ಸನತ್, ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ಸಂಯೋಜಕರಾದ ಶ್ರೀ ರಜತ್ ಬಂಗೇರ ಸ್ವಾಗತಿಸಿ, ಶ್ರೀ ಮಹೇಶ್ ಕುಮಾರ್ ವಂದಿಸಿದರು. ತರಬೇತುದಾರರಾದ ಶ್ರೀಮತಿ ಸಾದಿಕಾ ಬಾನು ಪ್ರಾಸ್ತಾವಿಸಿದರು. ವಿದ್ಯಾರ್ಥಿಗಳಾದ ಗುರುರಾಜ್ ಪ್ರಾರ್ಥಿಸಿ, ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.