ಕುಂದಾಪುರ (ನ,26): ದೇಶದ ಮೂಲಭೂತ ಕಾನೂನಾದ ಸಂವಿಧಾನವನ್ನು ಶಾಸನಬದ್ಧವಾಗಿ ಸಮರ್ಪಿಸಿಕೊಂಡ ನವಂಬರ್ 26ನೇ ದಿನವನ್ನು ದೇಶದಾದ್ಯಂತ ಸಂವಿಧಾನ ದಿನಾಚರಣೆ ಎಂದು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಯು ತಿಳಿದುಕೊಳ್ಳಬೇಕು ಎಂದು ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು.
ಅವರು ಕಾಲೇಜಿನಲ್ಲಿ ಎನ್ .ಎಸ್ . ಎಸ್ ಘಟಕ ಹಾಗೂ ಚುನಾವಣಾ ಸಾಕ್ಷಾರತ ಸಂಘದ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನ ದಿನಾಚರಣೆ ಹಾಗೂ ಯುವ ಮತದಾರರ ಸೇರ್ಪಡೆ ಅಭಿಯಾನದಲ್ಲಿ ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಮಾತನಾಡಿದರು. ಜೊತೆಗೆ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಹಾಗೆಯೇ ಸರ್ಕಾರದ ಆದೇಶ ಮೇರೆಗೆ ಕಾಲೇಜಿನಲ್ಲಿ ಯುವ ಮತದಾರರ ಸೇರ್ಪಡೆ ಅಭಿಯಾನವನ್ನು ಹಮ್ಮಿಕೊಂಡು ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದರೊಂದಿಗೆ ಮತದಾನದ ಮಹತ್ವದ ಬಗ್ಗೆ ತಿಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ .ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಉಪ ಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ ರಾವ್ ಗುಜ್ಜಾಡಿ ಹಾಗೂ ಎನ್.ಎಸ್.ಎಸ್ ಸಹ ಯೋಜನಾಧಿಕಾರಿ ದೀಪಾ ಪೂಜಾರಿ ಉಪಸ್ಥಿತರಿದ್ದರು .ಕಾಲೇಜಿನ ಬೋಧಕ -ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.