ಕುಂದಾಪುರ (ನ,26): ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿರುವ ನಾವು ಸಿಕ್ಕ ಅವಕಾಶವನ್ನು ಎಂದಿಗೂ ಬಿಡದೆ ಸದುಪಯೋಗಪಡಿಸಿಕೊಳ್ಳ ಬೇಕು.ಇದರಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಯಶಸ್ಸನ್ನು ಸಾಧಿಸಬಹುವುದು ಎಂದು ಡಾ|ಬಿ.ಬಿ .ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಕೆ ಉಮೇಶ್ ಶೆಟ್ಟಿ ಹೇಳಿದರು.
ಅವರು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಪ್ರವೀಣಾ ಪೂಜಾರಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿ ಕ್ಷೇಮ ಪಾಲನ ಸಮಿತಿಯ ಕಾರ್ಯದರ್ಶಿ ವಿಘ್ನೇಶ್ ಹಾಗೂ ಎಸ್ಕ್ಯೂ ಐ ಸಿ ಪ್ರತಿನಿಧಿ ಪೂರ್ಣಿಮಾ ಕಾಲೇಜಿನ ಕುರಿತಾದ ತಮ್ಮ ಅನುಭವವನ್ನು ಹಂಚಿಕೊಂಡರು. ಸಭಾ ಕಾರ್ಯಕ್ರಮದ ಬಳಿಕ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.