ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ “ರೌಟರ್ ತಂತ್ರಜ್ಞಾನ” ವಿಷಯದ ಮೇಲೆ ವೆಬಿನಾರ್ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಿಸ್ಕೋ ಕಂಪನಿಯಲ್ಲಿ ಟೆಕ್ನಿಕಲ್ ಲೀಡ್ ಇಂಜಿನಿಯರ್ ಆಗಿರುವ ಶ್ರೀ. ವಿವೇಕ್ ದಿನಕರ ರವರು ಭಾಗವಹಿಸಿದ್ದರು.
ಶ್ರೀ. ವಿವೇಕ್ ದಿನಕರ ರವರು ಇಲೆಕ್ಟ್ರಾನಿಕ್ಸ್ ಸಂವಹನದಲ್ಲಿ ವಿವಿಧ ರೀತಿಯ ರೌಟರ್ ತಂತ್ರಜ್ಞಾನದ ಉಪಯೋಗ ಮತ್ತು ಬಳಕೆಯ ಕುರಿತು ಉಪನ್ಯಾಸ ನೀಡಿದರು. ವಿವಿಧ ರೀತಿಯ ರೌಟರ್ ಪ್ರೋಟೋಕಾಲ್ ಕುರಿತು ಮಾಹಿತಿ ಒದಗಿಸಿದರು. ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗಳು ಸಂಪನ್ಮೂಲ ವ್ಯಕ್ತಿಯೊಂದಿಗೆ ಪ್ರಶ್ನೆಯೊತ್ತರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ ರವರ ಉಪಸ್ಥಿತಿಯಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರಮೀಳಾ ಸ್ವಾಗತಿಸಿ, ಸಹಾಯಕ ಪ್ರಾಧ್ಯಾಪಕ ಧ್ರುವ ಪಿ ಆಚಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.