ಕುಂದಾಪುರ (ನ,29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಡಿಸೆಂಬರ್ 05 ರಂದು ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣ ಕನ್ನಡ, ಕೊಡಗು ವ್ಯಾಪ್ತಿಯ ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.