ಕುಂದಾಪುರ (ನ,30): ವಿದ್ಯಾರ್ಥಿ ದೆಸೆಯಲ್ಲಿಯೇ ಮಾನವೀಯ ಮೌಲ್ಯ, ಆತ್ಮವಿಮರ್ಶೆ, ಆತ್ಮವಿಶ್ವಾಸ, ಸಮಯಪ್ರಜ್ಞೆ ,ಪುಸ್ತಕ ಪ್ರೀತಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿಗತ ಬದುಕಿನೊಂದಿಗೆ ಸಾಮಾಜಿಕ ಜವಾಬ್ದಾರಿ ಬಹಳ ಮುಖ್ಯ. ವರ್ತಮಾನದ ತಲ್ಲಣಗಳಿಗೆ ಸ್ಪಂದಿಸುತ್ತಾ, ಸಮಾಜದ ಕಡೆ ಗಮನಕೊಡಬೇಕು. ವಿದ್ಯಾರ್ಥಿಗಳು ಕೌಶಲ್ಯಗಳನ್ನು ವರ್ದಿಸಿಕೊಳ್ಳುವುದರ ಜೊತೆಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ ಎಂದು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಹೇಳಿದರು.
ಅವರು ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ನಿಟ್ಟೆ ವಿದ್ಯಾ ಸಂಸ್ಥೆಯ ನಿರ್ವಹಣೆ ಮತ್ತು ಅಧ್ಯಯನ ವಿಭಾಗದ ನಿರ್ದೇಶಕರಾದ ಶ್ರೀ ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೆಲ್ಲರೂ ಕೋಮು ಸಾಮರಸ್ಯದಿಂದ ಬದುಕಬೇಕು. ವಿದ್ಯಾರ್ಥಿಗಳು ವರ್ತಮಾನದ ಶೈಕ್ಷಣಿಕ ಬದಲಾವಣೆಗಳಿಗೆ ತೆರೆದುಕೊಳ್ಳಬೇಕು ಎಂದರು.
ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ಸತೀಶ್ ಶೆಟ್ಟಿ, ವಿದ್ಯಾರ್ಥಿ ನಾಯಕಿ ವಿನಿಷಿಯಾ, ಉಪನ್ಯಾಸಕ ಶ್ರೀ ದೀಪಕ್ ಮೂಲ್ಯ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲೆ ಭವಾನಿ ಶೆಟ್ಟಿ ವಾರ್ಷಿಕ ವರದಿ ವಾಚಿಸಿದರು. ಉಪಪ್ರಾಂಶುಪಾಲ ಡಾ| ಪ್ರಕಾಶ್ ಶೆಣೈ ಸ್ವಾಗತಿಸಿದರು. ಹಿಂದಿ ಉಪನ್ಯಾಸಕ ಶ್ರೀ ಶಾಂತರಾಮ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಸಂಧ್ಯಾ, ಅಧ್ಯಾಪಕರಾದ ಶ್ರೀ ಚಂದ್ರ ಜಿ. ನಾಯಕ್, ಸುರೇಖಾ ಶೆಟ್ಟಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಭೌತ ಶಾಸ್ತ್ರ ಉಪನ್ಯಾಸಕಿ ಅಕ್ಷಯ ಗೋಬಲೆ ವಂದಿಸಿದರು. ಗಣಿತ ಉಪನ್ಯಾಸಕಿ ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭ ಕ್ರೀಡೆ, ಶೈಕ್ಷಣಿಕ ಮತ್ತು ಸಾಂಸ್ಕೃತಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.