ಕಾರ್ಕಳ(ಡಿ,6): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 2022-23 ನೇ ಸಾಲಿನ ಪಾಲಕರ-ಶಿಕ್ಷಕರ ಸಭೆ ಡಿಸೆಂಬರ್ 04 ರಂದು ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್, ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವಿವಿಧ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಿ ತರಬೇತಿ ನೀಡಲಾಗುತ್ತಿದೆ.
ಆಯಾ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯನ್ನು ಅತ್ಯಂತ ಪಾರದರ್ಶಕವಾಗಿ ಪರಿಶೀಲಿಸಿ, ಲೋಪದೋಷಗಳನ್ನು ಪರಿಹರಿಸಲಾಗುತ್ತಿದೆ. ಮುಂಬರುವ NEET,CET, KVPY, NATA, NDA, IIT ಪರೀಕ್ಷೆಗಳಿಗೆ ನುರಿತ ಅನುಭವಿ ಪ್ರಾಧ್ಯಾಪಕರು ತರಬೇತಿ ನೀಡುತ್ತಿದ್ದು ವಿಶೇಷ ತರಗತಿಗಳನ್ನೂ ನಡೆಸಲಾಗುತ್ತಿದೆ. ಪಾಲಕರೂ ನಮ್ಮೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತಾನಾಡಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ತೀವ್ರ ಪೈಪೋಟಿ ನೀಡಬೇಕಾಗಿದೆ. ಇರುವ ಅವಕಾಶ ಉಪಯೋಗಿಸಿಕೊಳ್ಳಲು ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಪಾಲಕರಿಗೆ ಪ್ರಥಮ ಪಿಯುಸಿಯಿಂದ ಇಂದಿನವರೆಗೂ ನಡೆದ ವಿವಿಧ ಪರೀಕ್ಷೆಗಳ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.
ಸಂಸ್ಥಾಪಕರಾದ ಆದರ್ಶ ಎಂ ಕೆ, ಅಮೃತ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಹೆತ್ತವರನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕರಾದ ಗಣಪತಿ ಭಟ್ ಕೆ ಎಸ್ ಇಂದು ವಾಣಿಜ್ಯ ವಿಭಾಗದ CA, CS ಕ್ಷೇತ್ರಗಳಲ್ಲಿ ಅಪರಿಮಿತ ಅವಕಾಶಗಳಿವೆ. ನಮ್ಮ ಸಂಸ್ಥೆಯಿಂದ ಅನೇಕ ವಿದ್ಯಾರ್ಥಿಗಳು ಈಗಾಗಲೇ ವಿವಿಧ ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದು, ವಿಶೇಷವಾಗಿ ತಜ್ಞ ಅಧ್ಯಾಪಕರನ್ನು ಕರೆಸಿ ಅವರಿಂದ ಪಾಠ, ಪ್ರವಚನ ಕೋಚಿಂಗ್ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಉಪನ್ಯಾಸಕರು ಸಭೆಯಲ್ಲಿ ಪಾಲ್ಗೊಂಡು ಪಾಲಕರೊಂದಿಗೆ ಸಮಾಲೋಚನೆ ನಡೆಸಿದರು. ಉಪನ್ಯಾಸಕರಾದ ಲೋಹಿತ್ ಎಸ್ ಕೆ, ವಿನಾಯಕ ಜೋಗ್, ಉಮೇಶ್ ಕಾರ್ಯಕ್ರಮ ನಿರೂಪಿಸಿ ವಂದರ್ನಾಪಣೆ ಗೈದರು.