ಕುಂದಾಪುರ (ಡಿ,9): ಡಾ|. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ಮತ್ತು ಐ.ಟಿ. ಅಸೋಸಿಯೇಶನ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಅನುಪಮಾ ಕೋಟ, ವೈಸ್-ಪ್ರೆಸಿಡೆಂಟ್ ಡೆಲಿವರಿ, ಇನ್ಪೊಇನಪೈನಿಟ್ ಟೆಕ್ನೋಲಜಿ, ಉಡುಪಿ ಇವರು ಆಗಮಿಸಿ ಐ.ಟಿ. ಕಂಪನಿಯಲ್ಲಿನ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ವಿವರವಾಗಿ ತಿಳಿಸಿದರು.
ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ತರಗತಿಯಲ್ಲಿ ಕಲಿಯುವ ವಿಷಯವನ್ನು ನಿಜ ಜೀವನದಲ್ಲಿಯೂ ಕೂಡ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಹಾಗೂ ವಿಜ್ಞಾನ ಮತ್ತು ಗಣಕ ವಿಜ್ಞಾನದ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಜ್ಞಾನ ಮತ್ತು ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ತೇಜಸ್ವಿನಿ ಸ್ವಾಗತಿಸಿ, ತನ್ವಿಯವರು ವಂದಿಸಿದರು. ಗೌತಮಿ ಕಾರ್ಯಕ್ರಮ ನಿರೂಪಿಸಿದರು.
.