ಕುಂದಾಪುರ (ಡಿ,12): ಜಾತಿ, ಧರ್ಮ, ಲಿಂಗ ಹಾಗೂ ಬಣ್ಣದ ನೆಲೆಯಲ್ಲಿ ನಮ್ಮ ನಡುವೆ ಅಸಮಾನತೆ ಬರಬಾರದು. ವಿದ್ಯಾರ್ಥಿಗಳು ವಿಶ್ವಮಾನವ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಹಕ್ಕುಗಳ ಕುರಿತು ಚಿಂತಿಸಬೇಕು. ಹಕ್ಕುಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಸಂವಿಧಾನದ ತತ್ವಗಳನ್ನು ಅನುಸರಿಸುವ ಮೂಲಕ ಉತ್ತಮ ಪ್ರಜೆಗಳಾಗೊಣ ಎಂದು ಕುಂದಾಪುರದ ಹಿರಿಯ ನ್ಯಾಯವಾದಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹೇಳಿದರು.
ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ವಿಶ್ವಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.
ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಸ್ವಯಂ ಸೇವಕ ಪ್ರತಿನಿಧಿಗಳಾದ ಮೇಘನಾ , ನಿತೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಕ್ಷೀತಾ ವಂದಿಸಿದರು, ವಿದ್ಯಾರ್ಥಿನಿ ರಕ್ಷೀತಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ವೈಭವಿ ಭಟ್ ಪ್ರಾರ್ಥಿಸಿದರು.\