ಕುಂದಾಪುರ (ಜ,03) : ಆಡಳಿತ ಭಾಷೆಯಾಗಿ ಮಾನ್ಯತೆ ಪಡೆದ ಹಿಂದಿ ಭಾಷೆ ದೇಶದಲ್ಲಷ್ಟೇ ಅಲ್ಲದೇ, ವಿದೇಶಗಳಲ್ಲಿಯೂ ವ್ಯವಹಾರದ ಸಂದರ್ಭದಲ್ಲಿ ಅತಿಮುಖ್ಯ ಭಾಷೆಯಾಗಿ ಬಳಸಲ್ಪಡುತ್ತದೆ. ಹಿಂದಿ ಭಾಷೆಯನ್ನು ಕಲಿಯುವ ಮೂಲಕ ಸಂವಹನ ಕೌಶಲ್ಯವನ್ನು ಬೆಳೆಸಿಕೊಳ್ಳಿ ಎಂದು ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಶ್ರೀಮತಿ ಜಯಶೀಲ ಪೈ ಹೇಳಿದರು.
ಇವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ಸಂಘ ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ| ದೀಪಾ ಅತಿಥಿಗಳನ್ನು ಪರಿಚಯಿಸಿದರು. ಹಿಂದಿ ಸಂಘದ ಸಂಯೋಜಕಿ ಶ್ರೀಮತಿ ಪ್ರೀತಿ ಹೆಗ್ಡೆ ಸ್ವಾಗತಿಸಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ರೇವತಿ ಡಿ. ವಂದಿಸಿದರು. ವಿದ್ಯಾರ್ಥಿನಿ ಪೂರ್ಣಿಮಾ ನಿರೂಪಿಸಿದರು.