ಕುಂದಾಪುರ ( ಮಾ.14): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ನರೇನ್ ಅಕಾಡೆಮಿ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ತರಬೇತಿ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಸರಕಾರಿ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲು ಅಗತ್ಯವಿರುವ ಸ್ಪರ್ಧಾತ್ಮಕ ಪರೀಕ್ಷಾ ಕೌಶಲ್ಯಗಳನ್ನು ಹೆಚ್ಚಿಸುವ ಉದ್ಧೇಶದಿಂದ ಆರಂಭಗೊAಡಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಿರಂತರ ಕಠಿಣ ಪರಿಶ್ರಮ ವಹಿಸಿ, ಪರೀಕ್ಷೆಯಲ್ಲಿ ಯಶಸ್ಸು ತಮ್ಮದಾಗಿಸಿಕೊಳ್ಳಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನರೇನ್ ಅಕಾಡೆಮಿ ಬ್ರಹ್ಮಾವರ ಇದರ ಸ್ಥಾಪಕರು ಶ್ರೀ ಚಂದ್ರಕಾoತ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ಉಪನ್ಯಾಸಕ ಶ್ರೀ ಶರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.