ಉಡುಪಿ(ಎ,14): ಮಹಾನ್ ಮಾನವತವಾದಿ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಜಗತ್ತಿನಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸವನ್ನು ಮಾಡಿ, ಶೋಷಿತ ಸಮುದಾಯದ ಬಾಳಿನ ಬೆಳಕಾಗಿ, ಇಡೀ ವಿಶ್ವವೇ ಮೆಚ್ಚುವಂತಹ ಜಗತ್ತಿನ ಅತಿ ದೊಡ್ಡ , ಶ್ರೇಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಅಂಬೇಡ್ಕರ್ ರವರದ್ದು. ಅವರ ಕಠಿಣ ಪರಿಶ್ರಮ, ನಡೆದು ಬಂದ ದಾರಿ, ಅವರ ಜ್ಞಾನ, ಇಡೀ ವಿಶ್ವಕ್ಕೆ ಮಾದರಿ ಎಂದು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ ರವರು ತಮ್ಮ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.