ಗಂಗೊಳ್ಳಿ( ಎ,17): ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ(ರಿ),ಅಮೃತಾ ಯುವತಿ ಮಂಡಲ (ರಿ) ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ. ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ನನ್ನ ಅರಿವಿನ ಅಂಬೇಡ್ಕರ್ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.
ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೀಕ್ಷಾ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪವಿತ್ರ ಮೊಗೇರಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸುಜಯ್ ಶೆಟ್ಟಿ ಮತ್ತು ನಾವುಂದದ ರಿಚರ್ಡ್ ಅಲ್ಮೆಡಾ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿನಿ ರಜತಾ ಪೂಜಾರಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಬಹುಮಾನಗಳನ್ನು ಏಪ್ರಿಲ್ 19 ರಂದು ನಡೆಯಲಿರುವ ಡಾ ಬಿ.ಆರ್ ಅಂಬೇಡ್ಕರ್ ಯುವಕ ಮಂಡಲದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು ಎಂದು ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್.ಜಿ ತಿಳಿಸಿದ್ದಾರೆ.