ಕುಂದಾಪುರ( ಎ,21): ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ ಸಂಸ್ಥೆಯಾಗಿದ್ದು,ಇತ್ತೀಚಿನ ವರ್ಷಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಹಿಂದುಳಿದ ಮತ್ತು ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿವಿಧ ಸಂಯೋಜನೆಗಳಿದ್ದು ಪ್ರತಿ ವರ್ಷವು ಪ್ರತಿಶತ 90 % ಕ್ಕಿಂತ ಹೆಚ್ಚು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಬರುತ್ತಿದೆ.
ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 739 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತು 689 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 93.23% ದಾಖಲೆ ಫಲಿತಾಂಶ ಲಭಿಸಿದೆ. 149 ವಿದ್ಯಾರ್ಥಿಗಳು ವಿಶೇಷ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
347 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿಯೂ, 129 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿಯೂ ಹಾಗೂ 64 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿಯೂ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶ್ರಾವ್ಯ ಜಿ ದೇವಾಡಿಗ (580), ವಾಣಿಜ್ಯ ವಿಭಾಗದಲ್ಲಿ ರಾಹುಲ್ ಪೂಜಾರಿ( 588 ಮತ್ತು ಕಲಾ ವಿಭಾಗದಲ್ಲಿ ಧನ್ಯಶ್ರೀ (561) ಮತ್ತು ಅಣ್ಣೇಶ್ ವೇಶಗಾರ್ (561) ಇವರು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ . ಸಂಸ್ಥೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ಅಭಿನಂದನೆ ಕೋರಲಾಗಿದೆ.