ಕುಂದಾಪುರ,(ಮೇ, 29): ಬದುಕಿನಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ವಿದ್ಯಾರ್ಥಿ ದೆಸೆಯಲ್ಲೇ ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕವಾದುದು ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಮ್. ಬಾಲಕೃಷ್ಣ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ 2022-23ನೇ ಸಾಲಿನ ವಾರ್ಷಿಕೋತ್ಸವದ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು.
ಇನ್ನೋರ್ವ ಮುಖ್ಯ ಅತಿಥಿ ಬೆಂಗಳೂರಿನ ಟೊಯೊಟಾ ಕಿರ್ಲೊಸ್ಕರ್ ಮೋಟಾರ್ಸ್ ಗ್ರೂಪ್ ಡಿಪಾರ್ಟ್ಮೆಂಟ್ ಮುಖ್ಯಸ್ಥರಾದ ಶ್ರೀ ದೀಪಕ್ ಶೆಟ್ಟಿ ಬಾರ್ಕೂರು ಅತಿಥಿ ನೆಲೆಯಲ್ಲಿ ಮಾತನಾಡಿ ಯುವ ಸಮುದಾಯ ಸ್ವಾಮಿ ವಿವೇಕಾನಂದರ ತತ್ವ ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಜೀವನದಲ್ಲಿ ಉತ್ತಮ ಆಯ್ಕೆ, ಬದಲಾವಣೆಗೆ ಒಗ್ಗಿಕೊಳ್ಳುವುದು ಹಾಗೂ ನಿರಂತರ ಪರಿಶ್ರಮ ವಹಿಸಿದ್ದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ಪ್ರೀತಿ ಹೆಗ್ಡೆ, ವಿದ್ಯಾರ್ಥಿ ಪ್ರತಿನಿಧಿ ವಿಘ್ನೇಶ್ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಗಣಿತಶಾಸ್ತç ಉಪನ್ಯಾಸಕಿ ನಿರ್ಮಲ ಬಿಲ್ಲವ ಅತಿಥಿಗಳನ್ನು ಪರಿಚಯಿಸಿದರು.
ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ರ್ಯಾಂಕ್ ವಿಜೇತರನ್ನು ಪರಿಚಯಿಸಿದರು. ವಾಣಿಜ್ಯ ಉಪನ್ಯಾಸಕ ಶ್ರೀ ಸುಧೀರ್ ಕುಮಾರ್ ವಿಶೇಷ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಶ್ರೀ ಮಹೇಶ್ ಕುಮಾರ್ ವಂದಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ಮೋನಿಕಾ ಡಿಸೋಜಾ ನಿರೂಪಿಸಿದರು.