ಗಂಗೊಳ್ಳಿ(ಜೂ,17) : ಮಕ್ಕಳ ತಪ್ಪುಗಳನ್ನು ಪ್ರೀತಿಯಿಂದಲೇ ತಿದ್ದುವ ಅಭ್ಯಾಸವನ್ನು ಪೋಷಕರು ಬೆಳೆಸಿಕೊಳ್ಳಬೇಕು. ಮಕ್ಕಳ ಜೊತೆ ನಿರಂತರವಾದ ಉತ್ತಮ ಸಂವಹನ ಮತ್ತು ಸಂಬಂಧವನ್ನು ಕಾಪಿಟ್ಟುಕೊಳ್ಳಬೇಕು ಎಂದು ಬಸ್ರೂರು ಶಾರದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು,ವಿದ್ಯಾರ್ಥಿಗಳು ಮತ್ತು ಹೆತ್ತವರ ಸಮ್ಮಿಲನ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶಿನಾಥ್ ಪೈ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಉಪಸ್ಥಿತರಿದ್ದರು ರಸಾಯನಶಾಸ್ತ್ರ ಉಪನ್ಯಾಸಕಿ ಪವಿತ್ರ ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಥಾಮಸ್ ಪಿ ಎ ಪ್ರಸ್ತಾವಿಕ ಮಾತುಗಳಾಡಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು.
ಹಿಂದಿ ಭಾಷಾ ಉಪನ್ಯಾಸಕ ನಾರಾಯಣ ಈ ನಾಯ್ಕ್ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಕೆ ವಂದಿಸಿದರು.