ಕೊಲ್ಲೂರು(ಜು,2): ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನಲ್ಲಿ 2022-23ನೇ ಸಾಲಿನ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 42 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ವಹಿಸಿ ವಿದ್ಯಾರ್ಥಿಗಳು ಸೋಲು ಗೆಲವುವನ್ನು ಸಮಾನವಾಗಿ ಸ್ವೀಕರಿಸಿ ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ನಡತೆ ಮೈಗೂಡಿಸಿಕೊಳ್ಳುವುದರ ಜೊತೆಗೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೆಕೆಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಾ.ರಾಮಚಂದ್ರ ಅಡಿಗ, ಡಾ ಅತುಲ್ ಕುಮಾರ್ ಶೆಟ್ಟಿ, ಶ್ರೀಮತಿ ಸಂದ್ಯಾ ರಮೇಶ್, ಶ್ರೀಮತಿ ರತ್ನ ರಮೇಶ್, ನಿಕಟ ಪೂರ್ವ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ ಮಹೇಶ್ ಹಾಗೂ ಕಾಲೇಜಿನ ಬೋಧಕ ಬೋಧಕೇತರರು ಹಾಗೂ ವಸತಿ ನಿಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.ವಾಸುದೇವ ಉಡುಪ ಮಸ್ವಾಡಿ ವಂದಿಸಿ, ಜ್ಯೋತಿ ಶೆಟ್ಟಿ ಮತ್ತು ಸಂಗೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿಗಳಾದ ಅಮೃತ, ಕೀರ್ತನ, ನಾಗೇಶ, ಕೃಷ್ಣವೇಣಿ ತಮ್ಮ ಅನಿಸಿಕೆ ಹಂಚಿಕೊoಡರು.