ಕುಂದಾಪುರ (ಜು,3): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಲಲಿತ ಕಲಾಸಂಘದ ವತಿಯಿಂದ ವಿಸ್ತರಣಾ ಚಟುವಟಿಕೆಯನ್ನು ಅಂಪಾರು ಮೂಡುಬಗೆ ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಾಗೂ ಕಲೆಯ ಮಹತ್ವವನ್ನು ತಿಳಿಸುವ ಸಲುವಾಗಿ ಲಲಿತಾ ಕಲಾಸಂಘದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ, ಯಕ್ಷಗಾನ, ಭರತನಾಟ್ಯ, ಜಾನಪದ ನೃತ್ಯ ಹಾಗೂ ಅರೆ ಶಾಸ್ತ್ರೀಯ ನೃತ್ಯ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಯಿತು. ಇದರ ಜೊತೆಗೆ ಪ್ರೀತಿಯ ದ್ಯೋತಕವಾಗಿ ವಿಶೇಷ ಮಕ್ಕಳಿಗೆ ಶಿಕ್ಷಣಕ್ಕೆ ನೆರವಾಗುವ ಸಾಮಗ್ರಿಗಳನ್ನು ಹಾಗೂ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರಾದ ರವೀಂದ್ರ ಮತ್ತು ಶಿಕ್ಷಕರು ಹಾಗೂ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಲಲಿತ ಕಲಾಸಂಘದ ಸಂಯೋಜಕರಾದ ಶ್ರೀಮತಿ ದೀಪಿಕಾ.ಜಿ., ಸುಶ್ಮಿತಾ ಸಾಲಿಗ್ರಾಮ ಮತ್ತು ಮೋನಿಕಾ ಡಿಸೋಜಾ ಉಪಸ್ಥಿತರಿದ್ದರು.