ಹೆಮ್ಮಾಡಿ(ಜು,19): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಸುನಿಲ್ ರವರು ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿಯವರು ಸ್ವಾಗತಿಸಿ, ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.