ಕುಂದಾಪುರ (ಜುಲೈ 26): ವೀರಯೋಧರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುದು ನಮ್ಮ ಆಧ್ಯ ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಹೇಳಿದರು.
ಅವರು ಕಾಲೇಜಿನ ಎನ್.ಸಿ.ಸಿ. ಘಟಕದ ಅಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ಅಪ್ರತಿಮ ಯಶಸ್ಸಿನ ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತು ಭಾರತೀಯ ಸೈನ್ಯದ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಗ್ರಂಥಪಾಲಕರಾದ ಶ್ರೀ ಮಹೇಶ್ ನಾಯ್ಕ್ ಪ್ರಾರ್ಥಿಸಿದರು. ವಾಣಿಜ್ಯ ಉಪನ್ಯಾಸಕ ಹಾಗೂ ಎನ್.ಸಿ.ಸಿ. ಕೇರ್ ಟೇಕರ್ ಶ್ರೀ ಶರತ್ ಕುಮಾರ್ ವಂದಿಸಿದರು. ನಿರ್ವಹಣಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಅವಿತಾ ಕೊರೆಯಾ ನಿರೂಪಿಸಿದರು.