ಗಂಗೊಳ್ಳಿ(ಆ,31): ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಬ್ದುಲ್ ರಾಜಿಕ್ ಎಪ್ಪತ್ತು ಕೆ.ಜಿ ಕೆಳಗಿನ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಉಡುಪಿ ಜಿಲ್ಲೆಯಿಂದ ಆಯ್ಕೆ ಆಗಿರುತ್ತಾರೆ .
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ವೃಂದದವರು ಅಬ್ದುಲ್ ರಾಜಿಕ್ ಗೆ ಅಭಿನಂದನೆ ಕೋರಿದ್ದಾರೆ.