ಬಿದ್ಕಲ್ ಕಟ್ಟೆ(ಆ,31): ಇಲ್ಲಿನ ಸರ್ಕಾರಿ ಪಿ ಯು ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ,ವಾಣಿಜ್ಯಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಹಾಗೂ ಪೋಷಕರ ಸಭೆಯನ್ನು ಸಂಸ್ಥೆಯ ಪ್ರಾಂಶುಪಾಲ ರಾದ ಶ್ರೀ ವಿಘ್ನೇಶ್ವರ ಭಟ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.
ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಮುಂಬರುವ ಮದ್ಯವಾರ್ಷಿಕ ಪರೀಕ್ಷೆಯನ್ನು ಹೇಗೆ ಎದುರಿಸಬೇಕೆಂದು ಮಾರ್ಗದರ್ಶನ ಮಾಡಲಾಯಿತು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಶೇಕಡಾ 100%ರಷ್ಟು ಫಲಿತಾಂಶ ಗಳಿಸಲು ಇಂದಿನಿಂದಲೇ ಕಾರ್ಯೊನ್ಮುಖರಾಗಬೆಕೆಂದು ಪ್ರಾಂಶುಪಾಲರು ತಿಳಿಸಿದರು.
ರಾಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಕಿಣಿ ಎಲ್ಲಾರನ್ನು ಸ್ವಾಗತಿಸಿದರು . ಇತಿಹಾಸ ಉಪನ್ಯಾಸಕರಾದ ಶ್ರೀ ಸುರೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಕೊನೆಯಲ್ಲಿ ಕನ್ನಡ ಉಪನ್ಯಾಸಕಿ ಶ್ರೀಮತಿ ಗುಣರತ್ನ ವಂದಿಸಿದರು.ಕಾರ್ಯಕ್ರಮದಲ್ಲಿ ಕಾಲೇಜು ಶೈಕ್ಷಣಿಕ ಸಮಿತಿ ಉಪಾಧ್ಯಕ್ಷ ರಾದ ಶ್ರೀಮತಿ ಸುರೇಖಾ ಉಪಸ್ಥಿತರಿದ್ದರು.ವಿದ್ಯಾರ್ಥಿ ಪೋಪಕರಾದ ಶ್ರೀಮತಿ ಅಮಿತ ಮಕ್ಕಳ ಕಲಿಕೆಯಲ್ಲಿ ಪೋಷಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕೆಂದು ಅಭಿಪ್ರಾಯಪಟ್ಟರು.ಸಂಸ್ಥೆಯ ಉಪನ್ಯಾಸಕರು ಹಾಗೂ ಪೋಷಕ ಸಮಿತಿ ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.