ಕೊಲ್ಲೂರು(ಸೆ,04) : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು, ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವನ್ನು ಕಾಲೇಜಿನ ಹಳೆ ವಿದ್ಯಾರ್ಥಿ ಅಂತಾರಾಷ್ಟ್ರೀಯ ಮಟ್ಟದ ವೈಟ್ ಲಿಪ್ಟರ್ ಮಂಜುನಾಥ ಮರಾಠಿ ಉದ್ಘಾಟಿಸಿದರು.
ಕ್ರೀಡಾ ಜೀವನದ ಪರಿಶ್ರಮ ಸಾಧನೆ ಮತ್ತು ಬದ್ದತೆಯನ್ನು ಮಕ್ಕಳಿಗೆ ಅವರು ತಿಳಿಸಿದರು. ಕಠಿಣ ಪರಿಶ್ರಮ, ಬದ್ದತೆ ಮತ್ತು ಆತ್ಮ ವಿಶ್ವಾಸದಿಂದ ಯಾವುದೇ ಅಸಾಧ್ಯವನ್ನು ಸಾಧಿಸಿ ತೋರಿಸಬಹುದೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಾ. ಅತುಲ್ ಕುಮಾರ್ ಶೆಟ್ಟಿ ವಹಿಸಿ ಸದೃಢ ಮನಸ್ಸು ಮತ್ತು ಏಕಾಗ್ರತೆಯಿಂದ ಕುಸ್ತಿ ಪಂದ್ಯಾಟವನ್ನು ಜಯಿಸಬಹುದೆಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂಧ್ಯಾರಮೇಶ್, ರತ್ನಾರಮೇಶ್, ಜಯನಂದ ಹೋಬ್ಳಿದಾರ್, ಕೊಲ್ಲೂರು ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ವನಿತಾ ಶೇರುಗಾರ್, ಉಪಾಧ್ಯಕ್ಷರಾದ ನಾಗೇಶ್ ದಳಿ, ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ವಸಂತ್ ಶೆಟ್ಟಿ, ಭಂಡಾರಕಾರ್ಸ್ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶಂಕರನಾರಾಯಣ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರವಿಶಂಕರ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು.
ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಅಥಿತಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಶೆಟ್ಟಿ ಹುಂಚನಿ ಧನ್ಯವಾದ ಸಮರ್ಪಿಸಿರು.ಸಮಾಜಶಾಸ್ತ್ರ ಉಪನ್ಯಾಸಕ ನಾಗರಾಜ ಅಡಿಗ ಕಾರ್ಯಕ್ರಮ ನಿರೂಪಿಸಿದರು.