ಕುಂದಾಪುರ (ಆ, 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ‘ಪರಿಚಯ 2023’ ಕಾರ್ಯಕ್ರಮ ಆಯೋಜಿಸಲಾಯಿತು
. ಈ ‘ಪ್ರೇರಣಾ ಶಿಬಿರ’ದ ಅಂಗವಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಜೆಸಿಐ ತರಬೇತುದಾರರಾದ ಶ್ರೀ ಕೆ.ಕೆ. ಶಿವರಾಮ್ ಅವರು “ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭ ವಿದ್ಯಾರ್ಥಿಗಳಿಗೆ ಹಲವು ಜೀವನ ಮೌಲ್ಯಗಳನ್ನು ತಿಳಿಸುವುದರ ಜೊತೆಗೆ ಸಾಧನೆಯ ಉತ್ತುಂಗಕ್ಕೆ ಏರುವ ಮಾರ್ಗವನ್ನು ಹಲವು ಮಹಾನ್ ವ್ಯಕ್ತಿಗಳ ಜೀವನ ಶೈಲಿಯನ್ನು ಉದಾಹರಣೆಯಾಗಿ ತಿಳಿಸುವುದರ ಮೂಲಕ ವಿಶ್ಲೇಷಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಬೋಧಕ-ಬೋಧಕೇತರ ವೃಂದ, ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಿಂದಿ ವಿಭಾಗದ ಉಪನ್ಯಾಸಕಿ ಶ್ರೀಮತಿ ರೇವತಿ ಡಿ. ಅತಿಥಿಗಳನ್ನು ಪರಿಚಯಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಮೇಘ ನಿರೂಪಿಸಿದರು.