ಕುಂದಾಪುರ (ಸೆ.06): ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ನಮ್ಮ ಬದುಕಿನಲ್ಲಿ ಸವಾಲುಗಳನ್ನು ಎದುರಿಸಲು ಪೂರಕವಾಗಿದೆ. ಜೀವನ ಕೌಶಲ್ಯದ ಜೊತೆಗೆ ಕ್ರೀಯಾಶೀಲತೆ, ಸೃಜನಶೀಲತೆ, ಸಂವಹನ ಕಲೆ, ನಾಯಕತ್ವಗುಣ ಬೆಳೆಸಿಕೊಳ್ಳಲು ಕಾಲೇಜಿನಲ್ಲಿರುವ ವಿವಿಧ ವೇದಿಕೆಗಳು ಅತ್ಯವಶ್ಯಕವಾದುದು. ಆ ನೆಲೆಯಲ್ಲಿ ವಿದ್ಯಾರ್ಥಿಗಳು ಗಂಭೀರವಾಗಿ ಚಿಂತಿಸಬೇಕು ಮತ್ತು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೆಸ್ಕತ್ತೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲೀಷ್ ಶಿಕ್ಷಕರು ಹಾಗೂ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಅಶೋಕ್ ತೆಕ್ಕಟ್ಟೆ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರು ಹಾಗೂ ವಿವಿಧ ವೇದಿಕೆಗಳ ಸಂಯೋಜಕರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿವಿಧ ವೇದಿಕೆಗಳ ಸಂಯೋಜಕರಾದ ಶ್ರೀ ಹರೀಶ್ ಬಿ. ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಯೋಗೀಶ್ ಶ್ಯಾನುಭೋಗ್ ನಿರೂಪಿಸಿದರು.