ಕುಂದಾಪುರ(ಸೆ,10(: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕುಂದಾಪುರ, ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಸಹಯೋಗದೊಂದಿಗೆ ವಲಯ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಹಾಗೂ ವಿಜ್ಞಾನ ನಾಟಕ ಸ್ಪರ್ಧೆಇತ್ತೀಚೆಗೆ ನಡೆಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೋಭಾ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ 2023 ಸಿರಿಧಾನ್ಯಗಳ ವರ್ಷವಾದ್ದರಿಂದ ಸಿರಿಧಾನ್ಯಗಳ ಮಹತ್ವವನ್ನು ತಿಳಿಸುತ್ತಾ ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು ಎಂದರು. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಮಾತನಾಡುತ್ತಾ ವಿಜ್ಞಾನವೆಂದರೆ ಯಾವುದೋ ಕಠಿಣ ಮಾಹಿತಿಯ ಕಣಜವಲ್ಲ; ನಮ್ಮ ದೈನಂದಿನ ಚಟುವಟಿಕೆಗಳ ಬಗ್ಗೆ ನಮ್ಮೊಳಗೆ ನಾವು ಪ್ರಶ್ನೆ ಹಾಕಿಕೊಳ್ಳುತ್ತಾ ಅದಕ್ಕೆ ಉತ್ತರ ತಿಳಿದುಕೊಳ್ಳುವದೇ ವಿಜ್ಞಾನ ಎಂದು ಹೇಳುತ್ತಾ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕರಾದ ಶ್ರೀ ಸಂತೋಷ್ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಿಆರ್ಪಿ ಶ್ರೀಮತಿ ಸುನೀತಾ, ಬಿಆರ್ಪಿ ಶ್ರೀ ಮಿಲ್ಟನ್ ಕ್ರಾಸ್ಟಾ ಸಭೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಕಿರಣ್ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.