ಕುಂದಾಪುರ( ಸೆ.11): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ಬಿ.ಕಾಂ. ವಿಧ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಬಿ.ಕಾಂ. ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಅಂಕಗಳೊಂದೆ ಮುಖ್ಯವಲ್ಲ ಜೊತೆಗೆ ಈ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಧಾರಿತ ಶಿಕ್ಷಣ ತುಂಬಾ ಅವಶ್ಯಕ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ವಿದ್ಯಾರ್ಥಿಗಳನ್ನ ಉದ್ದೇಶಿಸಿ ಆಶಯದ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನ್ನಾಡಿದರು.

ಕಾರ್ಯಕ್ರಮದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿದರು. ಇನ್ನೋರ್ವ ಸಂಯೋಜಕರಾದ ಸತೀಶ್ ಕಾಂಚನ್ ವಂದಿಸಿದರು.ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ರಶ್ಮಿ ಉಡುಪ ಪ್ರಾರ್ಥಿಸಿದರು.











