ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್.ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಶಿಕ್ಷಕರು 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕುಂದಾಪುರದ ವತಿಯಿಂದ ಆಯೋಜಿಸಲ್ಪಟ್ಟ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು , ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಂಸ್ಥೆಯ ಡ್ರಾಯಿಂಗ್ ಶಿಕ್ಷಕ ರಮೇಶ್ ಹಾಂಡಾ ಡ್ರಾಯಿಂಗ್ ನಲ್ಲಿ ಪ್ರಥಮ ಸ್ಥಾನವನ್ನು ಮತ್ತು ಸಂಗೀತ ಶಿಕ್ಷಕ ಪ್ರಕಾಶ್ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು , ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ವಿಜೇತ ಶಿಕ್ಷಕರನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.