ಕುಂದಾಪುರ: ಗಂಗೊಳ್ಳಿಯ ಮುಖ್ಯರಸ್ತೆಯ ಮಹಿಳಾ ಕೋ ಆಪರೇಟಿವ್ ಸೊಸೈಟಿ ಕಟ್ಟಡದ ಉನ್ನತಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಜನವರಿ 30 ರಂದು ಬೈಂದೂರಿನ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಉದ್ಘಾಟಿಸಿದರು. ಸಾರ್ವಜನಿಕ ಆರೋಗ್ಯಕ್ಕೆ ನಮ್ಮ ಸರ್ಕಾರ ವಿಶೇಷ ಆದ್ಯತೆಯನ್ನು ನೀಡಿತ್ತಿದ್ದು, ಜನರು ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಯನ್ನು ಪಡೆದುಕೊಳ್ಳವಂತಾಗಬೇಕು ಎನ್ನುವ ಸದುದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಜನೌಷಧಿ ಕೇಂದ್ರ ಸ್ಥಾಪಿಸುವ ಯೋಜನೆಯನ್ನು ರೂಪಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಜನರು ಹೆಚ್ಚೆಚ್ಚು ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮ. ಸಿ .ಪೂಜಾರಿ, ಸದಸ್ಯ ಬಿ. ರಾಘವೇಂದ್ರ ಪೈ, ಶಾಂತಿ ಖಾರ್ವಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಕುಲಕರ್ಣಿ, ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶಾರದಾ ರಾಮಕೃಷ್ಣ ಶೇರುಗಾರ್, ಜನೌಷಧಿ ಕೇಂದ್ರದ ಶರಾವತಿ ಹೆಗ್ಡೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಾಜೇಶ್ ಹೆಗ್ಡೆ ಅತಿಥಿಗಳನ್ನು ಸ್ವಾಗತಿಸಿ, ವಂದಿಸಿದರು.