ಕುಂದಾಪುರ (ಫೆ.7): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಯ ನರ್ಸರಿ, ಎಲ್.ಕೆ.ಜಿ, ಯು. ಕೆ. ಜಿ ಮತ್ತು 2ನೇ ತರಗತಿಯ ವಿದ್ಯಾರ್ಥಿಗಳ ಗ್ರಾಂಡ್ ಪೇರೆಂಟ್ಸ್ ಡೇ ಇತ್ತೀಚೆಗೆ ಜರುಗಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೋಟೇಶ್ವರದ ಕೆನರಾ ಕಿಡ್ಸ್ ಪ್ರಾಂಶುಪಾಲೆ ಮತ್ತು ಮ್ಯಾನೇಜಿಂಗ್ ಟ್ರಸ್ಟಿಯಾಗಿರುವ ವಿನಂತಿ ಎಸ್ ಶೆಟ್ಟಿ ಆಗಮಿಸಿ, ಮಕ್ಕಳ ಜೀವನದಲ್ಲಿ ಅಜ್ಜಿ – ತಾತಂದಿರ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪುಟಾಣಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಅಕಾಡೆಮಿಕ್ ಕೊ-ಆರ್ಡಿನೇಟರ್ ವಿಲ್ಮಾ. ಡಿ. ಸಿಲ್ವಾ ಉಪಸ್ಥಿತರಿದ್ದರು. ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ಸ್ವಾಗತಿಸಿದರು. ಶಿಕ್ಷಕಿಯರಾದ ದಿವ್ಯ. ಎಚ್ ಮತ್ತು ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.