ಕುಂದಾಪುರ (ಫೆ.05) : ಇಲ್ಲಿನ ಪ್ರತಿಷ್ಠಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ವಿಭಾಗವು, ಐಸಿಟಿ ಅಕಾಡೆಮೆಯ ಮತ್ತು ಪೇ ಪಾಲ್ ಇಂಡಿಯಾ ಇದರ ಸಹಯೋಗದೊಂದಿಗೆ 15 ದಿನಗಳ AWS ಸರ್ಟಿಫೈಡ್ ಕ್ಲೌಡ್ ಪ್ರಾಕ್ಟೀಷನರ್ ಕೋರ್ಸ್ ಮತ್ತು ಸಾಫ್ಟ್ ಸ್ಕಿಲ್ಸ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ಯಾರೀಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಸುರೇಶ್ ಶೆಟ್ಟಿ ವೈ. ಅವರು ವಿದ್ಯಾರ್ಥಿ ನೆಲೆಯಲ್ಲಿ ಒದಗಿದ ಅವಕಾಶಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಪ್ರೇರೇಪಿಸಿ, ತಮ್ಮನ್ನು ತಾವು ಕೌಶಲ್ಯ ಭರಿತರನ್ನಾಗಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಇಂತಹ ತರಬೇತಿಗಳು ವಿದ್ಯಾರ್ಥಿಗಳ ಪ್ಲೇಸ್ಮೆಂಟ್ಗೆ ಹೇಗೆ ಅನಿವಾರ್ಯ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟರು. ತರಬೇತುದಾರರಾದ ಶ್ರೀ ಪ್ರವೀಣ್ ತೇಜ ಡಿ.ಎಸ್. ಉಪಸ್ಥಿತರಿದ್ದರು.
ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಶ್ರೀ ಹರೀಶ್ ಕಾಂಚನ್ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳಾದ ಪ್ರತೀಕ್ಷಾ ಪ್ರಾರ್ಥಿಸಿ ಸೀಮಾ ಸ್ವಾಗತಿಸಿ, ಸಿಂಚನಾ ವಂದಿಸಿದರು.