ಬೈಂದೂರು(ಜೂ, 29): ಉದ್ಯಮಿ ಗೋವಿಂದ ಬಾಬು ಪೂಜಾರಿ ನೇತ್ರತ್ವದ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನೂತನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭ ಜೂನ್, 29 ರಂದು ಬೈಂದೂರು ಸಮೀಪದ ಹೇರಂಜಾಲುವಿನಲ್ಲಿ ಜರುಗಿತು.
ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘಟಕವನ್ನು ಉದ್ಘಾಟಿಸಿ ಗೋವಿಂದ ಪೂಜಾರಿ ಅವರ ಸಾಧನೆಯನ್ನು ಶ್ಲಾಘಸಿದರು.
ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ,ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ದೇವಾಡಿಗ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೌರಿ ದೇವಾಡಿಗ, ಉದ್ಯಮಿ ವಿಜಯ್ ಶೆಟ್ಟಿ, ಸಂಜೀವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಮ್ಯಾನೆಜಿಂಗ್ ಡೈರೆಕ್ಟರ್ ಗೋವಿಂದ ಬಾಬು ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ಸುಬ್ರಹ್ಮಣ್ಯ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.