ಕುಂದಾಪುರ (ಜುಲೈ 26): ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಮಂಜು ಮೊಗವೀರ, ನಿವೃತ್ತ ಸೈನಿಕರು ಮಾತನಾಡಿ, ಸೇನಾ ದಿನಗಳ ಸವಿನೆನಪನ್ನು ಬಿಚ್ಚಿಡುವುದರ ಜೊತೆಗೆ ಕಾರ್ಗಿಲ್ ಯುದ್ಧದಲ್ಲಿ ಸೈನಿಕರ ಶೌರ್ಯವನ್ನು ಕೊಂಡಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ಅಪ್ರತಿಮ ಯಶಸ್ಸಿನ ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತು ಭಾರತೀಯ ಸೈನ್ಯದ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಎನ್.ಸಿ.ಸಿ. ಕೇರ್ ಟೇಕರ್ಸ್ಗಳಾದ ಶ್ರೀ ಹರೀಶ್ ಬಿ. ವಂದಿಸಿ, ಶ್ರೀ ಶರತ್ ಕುಮಾರ್ ನಿರೂಪಿಸಿದರು. ವಿದ್ಯಾರ್ಥಿಗಳಾದ ಸಹನಾ ಪ್ರಾರ್ಥಿಸಿ, ಧನ್ಯತಾ ಸ್ವಾಗತಿಸಿ, ತೇಜಶ್ರೀ ಅತಿಥಿಗಳನ್ನು ಪರಿಚಯಿಸಿದರು.