ಉಡುಪಿ (ಆ,09): ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ 2024-2026 ನೇ ಸಾಲಿನ ಅಧ್ಯಕ್ಷರಾಗಿ ಎಂ ಜಿ ಎಂ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಶಾನಾಡಿ ಸತೀಶ್ ಹೆಗ್ಡೆ ಹಾಗೂ ಕಾರ್ಯದರ್ಶಿಯಾಗಿ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ರವರು ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ಜೀವನ ಕುಮಾರ ಶೆಟ್ಟಿ ಹರ್ಕೂರ್ ಹಾಗೂ ಕಾರ್ಯದರ್ಶಿ ಮಂಜುನಾಥ ಜೋಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.