ಕುಂದಾಪುರ (ಆಗಸ್ಟ್ 07) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕವು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ‘3 ದಿನದ ಸಾಫ್ಟ್ ಸ್ಕಿಲ್ ತರಬೇತಿ’ಯನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೋಟಿವೇಶನ್ ಸ್ಪೀಕರ್ ಡಾ| ಶರಣ್ ಕುಮಾರ್ ಶೆಟ್ಟಿಯವರು ಉದ್ಯೋಗ ಪಡೆಯುವಲ್ಲಿ ಅಂಕಗಳಷ್ಟೆ ಅಗತ್ಯವಿರುವ ಕೌಶಲ್ಯಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕೌಶಲ್ಯಗಳು ವಿದ್ಯಾರ್ಥಿಗಳನ್ನು ಸ್ಪರ್ಧಾ ಚೇತನರನ್ನಾಗಿಸಿ ಅವಕಾಶಗಳನ್ನು ತೆರೆದುಕೊಳ್ಳುವಂತೆ ಮಾಡುತ್ತದೆ ಎಂದರು. ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ನ ಶ್ರೀ ಜೌಶ್ ಡ್ಯಾನಿಯಲ್ ಮಾತನಾಡಿ 3 ದಿನದ ಕಾರ್ಯಾಗಾರದ ಬಗ್ಗೆ ವಿವರಿಸಿದರು. ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜಕರಾದ ಶ್ರೀ ಮಹೇಶ್ ಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭ ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ಪ್ರಾಧ್ಯಾಪಕರಾದ ಶ್ರೀ ಅಕ್ಷಯ್ ಕುಮಾರ್ ಅತಿಥಿಯನ್ನು ಪರಿಚಯಿಸಿದರು. ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಶ್ರೀ ಸುರೇಶ್ ಕಾಮತ್ ಕೆ. ವಂದಿಸಿದರು. ಇಂಗ್ಲೀಷ್ ಪ್ರಾಧ್ಯಾಪಕಿ ಶ್ರೀಮತಿ ಸ್ವಾತಿ ಜಿ. ರಾವ್ ನಿರೂಪಿಸಿದರು. ವಿದ್ಯಾರ್ಥಿನಿ ಅನುಷಾ ಪ್ರಾರ್ಥಿಸಿದರು.