ಹೊಸಂಗಡಿ(ಆ,13): ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ ಶಾನ್ಕಟ್ಟು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ಕೌಶಲ್ಯಗಳ ಸಮರ್ಪಕ ಬಳಕೆಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನೀಡಿದರು. ವಿದ್ಯಾರ್ಥಿಗಳಲ್ಲಿ ಸಾಮಾನ್ಯವಾಗಿ ಇರಬೇಕಾದ ಕೌಶಲ್ಯಗಳು ಹಾಗೂ ಪ್ರಸಕ್ತ ಸಮಯದಲ್ಲಿ ಅದರ ಅಗತ್ಯತೆ ಬಗ್ಗೆ ಉದಾಹರಣೆಗಳ ಮೂಲಕ ತಿಳಿಸಿದರು. ವಿದ್ಯಾರ್ಥಿಗಳಿಗೆ ಪೂರಕ ಪ್ರಶ್ನೆಗಳ ಮೂಲಕ ಸಂವಹನ ನಡೆಸಿ ಅವರಿಗೆ ಮಾಹಿತಿಯನ್ನು ನೀಡಿದರು.
ಈ ಕಾರ್ಯಕ್ರಮ ದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಭಾಗವಹಿಸಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ರಣಜಿತ್ ಕುಮಾರ್ ಶೆಟ್ಟಿ ನಿರೂಪಿಸಿದರು.ರಾಜ್ಯ ಶಾಸ್ತ್ರ ಉಪನ್ಯಾಸಕ ಶ್ರೀ ಎಜಾಸ್ ಇವರು ಸ್ಮರಣಿಕೆ ನೀಡಿ ಗೌರವಿಸಿದರು.