ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 78ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ”ಸೈನಿಕರಿಗೊಂದು ಗೌರವಾರ್ಪಣೆ” ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ನಿವ್ರತ್ತ ಯೋಧ ಶ್ರೀ ದಿನೇಶ್ ಆಚಾರ್ಯ ಆಲೂರು ಇವರನ್ನು ಸ್ವಗ್ರಹದಲ್ಲಿ ಅಗಸ್ಟ್ 15 ರಂದು ಸನ್ಮಾನಿಸಿ ಗೌರವಿಸಲಾಯಿತು.
ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮೊಗವೀರ ಮಹಾಜನ ಸೇವಾ ಸಂಘ (ರಿ), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ ಶ್ರೀ ದಿನೇಶ್ ಆಚಾರ್ಯರವರ ಸೈನ್ಯದಲ್ಲಿನ ಸೇವೆ ಮತ್ತು ಸಾಧನೆಯ ಕುರಿತು ಹೆಮ್ಮೆ ವ್ಯಕ್ತಪಡಿಸಿದರು.
ಮೊಗವೀರ ಮಹಾಜನ ಸೇವಾ ಸಂಘ(ರಿ ),ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೇಶ್ ದೇವಾಡಿಗ, ಮಹಿಷಾಸುರಮರ್ದಿನಿ ಸ್ತ್ರೀಶಕ್ತಿ ಬಗ್ವಾಡಿ ಸಂಘದ ಅಧ್ಯಕ್ಷರಾದ ಶ್ಯಾಮಲಾ ಜಿ.ಚಂದನ್,
ಶ್ರೀ ಮಹಿಷಾಸುರ ಮರ್ದಿನಿ ಭಕ್ತವೃಂದ ಬೆಂಗಳೂರು ಇದರ ಸ್ಥಾಪಕ ಅಧ್ಯಕ್ಷರಾದ ಶ್ರೀಧರ್ ಬಗ್ವಾಡಿ, ಹೆಮ್ಮಾಡಿ ಘಟಕದ ಕಾರ್ಯದರ್ಶಿ ಶ್ರೀ ಜಗದೀಶ ನೆಂಪು, ಕೋಶಾಧಿಕಾರಿ ವಿಜಯ ಕಾಂಚನ್ ನಾಡ, ಸಾಂಸ್ಕೃತಿಕ ಕಾರ್ಯದರ್ಶಿ ಜಯಂತ್ ಕುಂದರ್ ಬಾಳಿಕೆರೆ , ಮೊಗವೀರ ಮಹಾಜನ ಸೇವಾ ಸಂಘ (ರಿ ),ಬಗ್ವಾಡಿ ಹೋಬಳಿ,ಕುಂದಾಪುರ ಶಾಖೆಯ ಸದಸ್ಯರು, ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕದ ಸದಸ್ಯರು ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೆಮ್ಮಾಡಿ ಘಟಕದ ಗೌರವಾಧ್ಯಕ್ಷ ಲೋಹಿತಾಶ್ವ ಆರ್. ಕುಂದರ್, ಸನ್ಮಾನ ಪತ್ರವನ್ನು ವಾಚಿಸಿದರು. ಘಟಕದ ನಿಕಟಪೂರ್ವ ಕಾರ್ಯದರ್ಶಿ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.