ಕುಂದಾಪುರ (ಆ, 23): ಕೋಡಿ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನ ವಿವಿಧ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇದರ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಕಿಣಿಯವರು ಆಗಸ್ಟ್ 23 ರಂದು ನೆರವೇರಿಸಿದರು.
ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ಪರಿಚಯಿಸುವುದರ ಜೊತೆಗೆ ಪಠ್ಯಕ್ರಮವನ್ನು ಹೇಗೆ ಅಳವಡಿಸಿಕೊಳ್ಳಬೇಕು ಹಾಗೂ ಶೈಕ್ಷಣಿಕವಾಗಿ ಹೇಗೆ ಸಿದ್ಧರಾಗಬೇಕೆಂಬುದನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಕಲಿಕೆಗೆ ಪೂರಕವಾದ ಸ್ವಾತಂತ್ರ್ಯ ಹಾಗೂ ಪರಿಸರ ಈ ಸಂಸ್ಥೆಯಲ್ಲಿ ಇದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ಸಂಘಟನೆಯನ್ನು ಬೆಳೆಸುವಲ್ಲಿ ಕಾಲೇಜು ಪ್ರಯತ್ನಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ,ವಿದ್ಯಾರ್ಥಿಗಳು ಪಠ್ಯ ವಸ್ತುವಿಗೆ ಮಾತ್ರ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಬ್ಯಾರಿ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಶ್ರೀಹಾಜಿ ಕೆ ಎಂ ಅಬ್ದುಲ್ ರೆಹಮಾನ್ ಬ್ಯಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ನಿಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಶಬೀನಾ ಎಚ್. ಉಪಸ್ಥಿತರಿದ್ದರು.
ಅಂತಿಮ ಬಿ ಕಾಂ ವಿದ್ಯಾರ್ಥಿನಿ ಆಸಿಲ್ ಸ್ವಾಗತಿಸಿದರು. ದ್ವಿತೀಯ ಬಿಕಾಂನ ವಿದ್ಯಾರ್ಥಿನಿ ಪಂಚಮಿ ಅತಿಥಿಗಳನ್ನು ಪರಿಚಯಿಸಿದರು. ದ್ವಿತೀಯ ಗಣಕ ವಿಭಾಗದ ವಿದ್ಯಾರ್ಥಿನಿ ರಫತ್ ವಂದಿಸಿದರು. ತೃತೀಯ ಬಿ ಸಿ ಎ ವಿಭಾಗದ ಮಿಸ್ಬ ನಿರೂಪಿಸಿದರು.