ಕುಂದಾಪುರ(ಆ,25): ಮೊಗವೀರ ಯುವ ಸಂಘಟನೆ (ರಿ ),ಉಡುಪಿ ಜಿಲ್ಲೆ ಇದರ ಕುಂದಾಪುರ ಘಟಕದ 2024 -26 ನೇ ಸಾಲಿನ ನೂತನ ಪದಾಧಿಕಾರಿಗಳ ಪದ ಪ್ರಧಾನ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಏಪ್ರಿಲ್ 25ರ ಆದಿತ್ಯವಾರದಂದು ಕುಂದಾಪುರದ ಚಿಕ್ಕಮ್ಮನಸಾಲು ರಸ್ತೆಯ ಮೊಗವೀರ ಭವನದಲ್ಲಿ ಜರಗಿತು.
ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಮೊಗವೀರ ಸಮುದಾಯವನ್ನು ಸಂಘಟಿಸುವುದರ ಜೊತೆಗೆ ಯುವಶಕ್ತಿಯನ್ನು ಸಕ್ರೀಯವಾಗಿ ತೊಡಗಿಸಿಕೊಂಡು ಮೊಗವೀರ ಯುವ ಸಂಘಟನೆ ಇನ್ನೂ ಬಲಿಷ್ಠವಾಗಿ ಬೆಳೆಯಲಿ ಎಂದು ಹೇಳಿದರು.
ಕುಂದಾಪುರ ಘಟಕದ ಅಧ್ಯಕ್ಷ ಚಂದ್ರಹಾಸ ಕೋಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಗೇಶ್ ಹಳ್ನಾಡು, ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಮಾಧವ ಕುಂದಾಪುರ ಹಾಗೂ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಲಾಯಿತು. ಹಾಗೆಯೇ ಸಂದರ್ಭದಲ್ಲಿ ಕುಂದಾಪುರ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರ ಮರಕಾಲ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ್ ಸಿ.ಸೌಕೂರು ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಅಧ್ಯಕ್ಷ ಜಯಂತ್ ಅಮೀನ್ ಕೋಡಿ, ದ,ಕ ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷರಾದ ಜಯ ಸಿ.ಕೋಟ್ಯಾನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ಮೊಗವೀರ ಯುವ ಸಂಘಟನೆ ನಿಕಟಪೂರ್ವ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ಮೊಗವೀರ ಯುವ ಸಂಘಟನೆ ಮಾಜಿ ಅಧ್ಯಕ್ಷರಾದ ಸದಾನಂದ ಬಳ್ಳೂರು, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ರಾಮ ನಾಯ್ಕ ಗುಜ್ಜಾಡಿ, ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕದ ಗೌರವಾಧ್ಯಕ್ಷರಾದ ಗಣೇಶ್ ಮೆಂಡನ್ ಉಪಸ್ಥಿತರಿದ್ದರು
ನೂತನ ಅಧ್ಯಕ್ಷರಾದ ನಾಗೇಶ್ ಹಳ್ಳಾಡು ಎಲ್ಲರ ಸಹಕಾರ ಕೋರಿದರು. ಚೆಸ್ನಲ್ಲಿ ಸಾಧನೆ ಮಾಡಿದ ವರ್ಣಿತ ಕುಂದರ್, ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಚಿನ್ ನಾಯ್ಕ ಬಸ್ರುರು ಇವರನ್ನು ಅಭಿನಂದಿಸಲಾಯಿತು.
ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಚಂದ್ರಹಾಸ ಕೋಣಿ, ನಿಕಟಪೂರ್ವ ಕಾರ್ಯದರ್ಶಿ ಸಂತೋಷ್ ಮದ್ದುಗುಡ್ಡೆ ಅವರನ್ನು ಸನ್ಮಾನಿಸಲಾಯಿತು.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಘಟಕ ವ್ಯಾಪ್ತಿಯ ಗುರಿಕಾರರಿಗೆ ಗೌರವಧನ ನೀಡಿ ಗೌರವಿಸಲಾಯಿತು.
ಮಾಜಿ ಅಧ್ಯಕ್ಷ ಸುರೇಶ ವಿಠಲವಾಡಿ ಸ್ವಾಗತಿಸಿದರು. ಮಾಜಿ ಅಧ್ಯಕ್ಷರಾದ ಸದಾನಂದ ಬಳ್ಳೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿಕಟಪೂರ್ವ ಕಾರ್ಯದರ್ಶಿ ಸಂತೋಷ ಮುದ್ದುಗುಡ್ಡೆ ವರದಿ ಮಂಡಿಸಿದರು. ಪ್ರಕಾಶ್ ಆನಗಳ್ಳಿ ಸನ್ಮಾನಿತರನ್ನು ಪರಿಚಯಿಸಿದರು. ನೂತನ ಕಾರ್ಯದರ್ಶಿ ಮಾಧವ ಕುಂದಾಪುರ ವಂದಿಸಿದರು. ಸುಧಾಕರ ಕಾಂಚನ್ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದ ಮೊದಲು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಹಾಗೆ ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕನಸು ಮ್ಯೂಸಿಕಲ್ ಕುಂದಾಪುರ ಇವರಿಂದ ಸಂಗೀತ ರಸಮಂಜರಿ, ಸಿನಿಮಾ ನೃತ್ಯ, ಮನೋ ರಂಜನ ಕ್ರೀಡೆ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.