ಕುಂದಾಪುರ (ಆ ,20) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 40ಕೆಜಿ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ವಿ.ಕೆ.ಆರ್. ಪ್ರೌಢ ಶಾಲೆಯ 9ನೇ ತರಗತಿಯ ಚಿರಾಗ್ ಯು. ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿರುತ್ತಾನೆ.
ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ರವರ ಮಾರ್ಗದರ್ಶನ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ನಾಗೇಶ್ ಪ್ರಭು ಮತ್ತು ವೀರೇಂದ್ರ ನಾಯಕ್ ರವರಿಂದ ಪ್ರೇರಣೆ ಮತ್ತು ಕುಂದಾಪುರದ ಕೆಡಿಎಫ್ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯ ಶಿಕ್ಷಕರಿಂದ ಶಿಸ್ತುಬದ್ಧ ತರಬೇತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಯನ್ನು ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯ ಶಿಕ್ಷಕರು, ಸಹಾಯಕ ಮುಖ್ಯ ಶಿಕ್ಷಕರು, ಶಿಕ್ಷಣ ಸಂಯೋಜಕರು ಅಭಿನಂದಿಸಿದರು.