ಹೆಮ್ಮಾಡಿ (ಸ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ,ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀ ಶಕ್ತಿ, ಇತರೆ ಸಹಕಾರಿ ಸಂಘಗಳ ನೌಕರರ ಒಕ್ಕೂಟ(ರಿ.)ಕುಂದಾಪುರ. ಲಯನ್ಸ್ ಕ್ಲಬ್ ನಾವುಂದ ಮಹಾವಿಷ್ಣು ಯುವಕ ಮಂಡಲ(ರಿ.) ಹರೆಗೋಡು, ಮಾನಸ ಯುವತಿ ಮಂಡಲ ಹರಗೋಡು ಇವರ ಸಹಕಾರದೊಂದಿಗೆಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಸೆಪ್ಟೆಂಬರ್ 01ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ).ದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಒಟ್ಟು 107 ಯೂನಿಟ್ ರಕ್ತವನ್ನು ಶಿಬಿರದಲ್ಲಿ ಸಂಗ್ರಹಿಸಲಾಯಿತು.
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಜಿಲ್ಲಾಧ್ಯಕ್ಷರಾದ ಶ್ರೀ ಜಯಂತ್ ಅಮೀನ್ ಕೋಡಿ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿ ನೆಲೆಯಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ ), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ ಹಾಗೂ ಮಾಜಿ ಅಧ್ಯಕ್ಷರಾದ ಎಂಎಂ ಸುವರ್ಣ, ಕಾರ್ಯದರ್ಶಿ ಪ್ರಭಾಕರ ಸೇನಾಪುರ,ಮಹಾವಿಷ್ಣು ಯುವಕ ಮಂಡಲ(ರಿ ), ಹರೆಗೋಡು ಇದರ ಅಧ್ಯಕ್ಷರಾದ ದೀಪಕ್ ರಾಜ್,ಲಯನ್ಸ್ ಕ್ಲಬ್ ನಾವುಂದ ಇದರ ಅಧ್ಯಕ್ಷರಾದ ಸಮರ ಶೆಟ್ಟಿ,ಜಿಲ್ಲಾ ಸಂಘಟನೆಯ ಮಾಜಿ ಅಧ್ಯಕ್ಷರಾದ ಶ್ರೀ ರಾಜೇಂದ್ರ ಸುವರ್ಣ ಹಿರಿಯಡ್ಕ, ಪ್ರಧಾನ ಕಾರ್ಯದರ್ಶಿ ರವೀಂದ ಪುತ್ರನ್,ಹೆಮ್ಮಾಡಿ ಘಟಕದ ಉಸ್ತುವಾರಿ ರವೀಶ್ ಕೊರವಾಡಿ, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀಶಕ್ತಿ ಅಧ್ಯಕ್ಷರಾದ ಶ್ಯಾಮಲಾ ಜಿ. ಚಂದನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಗೌರವಾಧ್ಯಕ್ಷ ಲೋಹಿತಾಶ್ವ ಆರ್. ಕುಂದರ್ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಡಿದರು. ಕಾರ್ಯದರ್ಶಿ ಜಗದೀಶ್ ನೆಂಪು ವಂದಿಸಿದರು. ಉಪಾಧ್ಯಕ್ಷರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ನಿರೂಪಿಸಿದರು.