ಕುಂದಾಪುರ( ಸೆ: 3): ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಹಯೋಗದೊಂದಿಗೆ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ ನೆರವೇರಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಅಧ್ಯಕ್ಷರಾದ ಶ್ರೀಯುತ ಜಯಕರ್ ಶೆಟ್ಟಿಯವರು ಉದ್ಘಾಟಿಸಿ, ‘ಪ್ರತಿಯೊಂದು ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳು ಪ್ರಾರಂಭಗೊಳ್ಳಬೇಕು. ಮಾನವೀಯತೆಯ ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು. ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಯಾರು ಕಷ್ಟದಲ್ಲಿ ಇರುತ್ತಾರೋ ಅವರಿಗೆ ಸಹಾಯ ಮಾಡುವುದು ರೆಡ್ ಕ್ರಾಸ್ ಸಂಸ್ಥೆಯ ಉದ್ದೇಶ ಹಾಗೂ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆ ಗಮನ ನೀಡಬೇಕು. ಸ್ವಸ್ಥ ಆರೋಗ್ಯ ಸ್ವಸ್ಥ ಸಮಾಜ ನಿರ್ಮಾಣಗೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಬ್ಯಾರೀಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಹಾಜಿ ಕೆ ಎಂ ಅಬ್ದುಲ್ ರೆಹಮಾನ್ ರವರು ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ, ಮನುಷ್ಯನಿಗೆ ಮುಖ್ಯವಾಗಿ ಬೇಕಾಗುವುದು ರಕ್ತ. ಇದರ ಸಂರಕ್ಷಣೆಯ ಕಾರ್ಯವನ್ನು ರೆಡ್ ಕ್ರಾಸ್ ಸಂಸ್ಥೆ ಮಾಡುವುದು ನಿಜಕ್ಕೂ ಒಳ್ಳೆಯ ಕೆಲಸ ಹಾಗೂ ಪ್ರತಿಯೊಬ್ಬರೂ ರಕ್ತದಾನವನ್ನು ಮಾಡಿ ಎಂದು ತಿಳಿಸಿದರು.
ಸಂಯೋಜಕರಾದ ಸತ್ಯನಾರಾಯಣ ಪುರಾಣಿಕರವರು ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೆರವೇರಿಸಿದರು. ಕಾಲೇಜಿನ ಘಟಕದ ಸಂಯೋಜಕರಾದ ಪ್ರೊಫೆಸರ್ ಅಹಮದ್ ಖಲೀಲ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಖಜಾಂಚಿಯವರಾದ ಶ್ರೀಯುತ ಶಿವರಾಮ್ ಶೆಟ್ಟಿ, ಪ್ರಾಂಶುಪಾಲೆಯವರಾದ ಪ್ರೊಫೆಸರ್ ಶಬೀನಾ ಹೆಚ್, ಸಂಯೋಜಕಿಯವರಾದ ಜಾಸ್ಮಿನ್ ಫೆರ್ನಾಂಡಿಸ್ , ವಿದ್ಯಾರ್ಥಿ ಪ್ರತಿನಿಧಿಯಾದ ದ್ವಿತೀಯ ಬಿಕಾಂನ ವಿದ್ಯಾರ್ಥಿ ಇಫಾಯತ್ ಉಲ್ಲಾ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ತೃತೀಯ ಬಿಸಿಎ ವಿಭಾಗದ ಆಲಿಯ ನಿರೂಪಿಸಿದರು. ದ್ವಿತೀಯ ಬಿಕಾಂನ ವಿದ್ಯಾರ್ಥಿನಿಯಾದ ಸುಹಾನ ಪರ್ವೀನ್ ಸ್ವಾಗತಿಸಿ, ದ್ವಿತೀಯ ಬಿಬಿಎ ವಿದ್ಯಾರ್ಥಿನಿಯಾದ ಮಿಶ್ರ ರವರು ವಂದಿಸಿದರು.