ಕುಂದಾಪುರ (ಸೆ ,04): ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮಂಗಳೂರು, ಇವರು ಆಗಸ್ಟ್ ,31 ರಂದು ಆಯೋಜಿಸಿದ ರಾಷ್ಟ್ರಮಟ್ಟದ ಐಟಿ ಮತ್ತು ಕಲ್ಚರಲ್ ಫೆಸ್ಟ್ ‘ಟೆಕ್ನೋ ಕಾರ್ಟ್ಸ್ ಜೋಶಿಯಾನ 13.0’ ಕಾರ್ಯಕ್ರಮದಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ, ಐಟಿ ವೆಬ್ ಡಿಸೈನ್ ಸ್ಪರ್ಧೆಯಲ್ಲಿ ಅಂತಿಮ ಬಿಸಿಎ ವಿದ್ಯಾರ್ಥಿಗಳಾದ ರೋಹನ್ ಮತ್ತು ನಿತಿನ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ ಹಾಗೂ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಅಂತಿಮ ಬಿಸಿಎ ನ ವಿದ್ಯಾರ್ಥಿಗಳಾದ ಶ್ರೀಧರ್ ಹಾಗೂ ಸುಮುಖ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
ಈ ಸ್ಪರ್ಧೆಯಲ್ಲಿ ವಿವಿಧ ವಿಶ್ವವಿದ್ಯಾಲಯದ ಸುಮಾರು 15 ಇಂಜಿನಿಯರಿಂಗ್ ಹಾಗೂ ಪದವಿ ಕಾಲೇಜಿನ ತಂಡಗಳು ಭಾಗವಹಿಸಿದ್ದವು.