ಉಡುಪಿ : ಪ್ರಗತಿಪರ ಕೃಷಿಕ, ದೇಶಿಯ ಗೋವುಗಳ ರಕ್ಷಣೆ ಮತ್ತು ಪಂಚಗವ್ಯ ಉತ್ಪನ್ನಗಳ ಮಹತ್ವದ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುತ್ತಿರುವ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದ ಕಪಿಲೆ ಗೋ ಸಮೃದ್ಧಿ ಟ್ರಸ್ಟ್ (ರಿ) ಇದರ ಪ್ರವರ್ತಕರಾದ ಶ್ರೀಕುಮಾರ್. ಎಸ್. ಕಾಂಚನ್ ರವರಿಗೆ ಕರ್ನಾಟಕ ಸರ್ಕಾರ 2020-21 ನೇ ಸಾಲಿನ ಆತ್ಮ ಯೋಜನೆಯಡಿ, ಕೃಷಿ ಸಂಸ್ಕರಣೆ ವಿಭಾಗದಲ್ಲಿ ಉಡುಪಿ ಜಿಲ್ಲಾ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದೆ.
ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ. ಎಸ್. ಅಂಗಾರ ರವರು ಉಡುಪಿ ಜಿಲ್ಲಾಡಳಿತ ನೇತೃತ್ವದಲ್ಲಿ ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಿದರು.