ಕುಂದಾಪುರ (ಸೆ.11): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ 1 & 2ರ ಆಶ್ರಯದಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳು ಎಂಬ ವಿಷಯದ ಕುರಿತ ಅರಿವು ಮೂಡಿಸುವ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಮಾದಕ ಸೇವನೆಯ ವಿವಿಧ ಮಜಲುಗಳು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಲಹೆಗಾರರಾದ ಮಂಜುಳಾ ಶೆಟ್ಟಿ ಉಪನ್ಯಾಸ ನೀಡಿದರು. ಇದೇ ಸಂದರ್ಭ ವಿವಿಧ ದೃಶ್ಯ ಮುದ್ರಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಕುರಿತು ಅರಿವು ಮೂಡಿಸಿದರು.
ಕಾಲೇಜಿನ ಉಪ-ಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಘಟಕ 1ರ ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್. ಘಟಕ 2ರ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಪ್ರಾಸ್ತಾವಿಸಿದರು. ವಿದ್ಯಾರ್ಥಿಗಳಾದ ಪೂಜಾ ಸ್ವಾಗತಿಸಿ, ಶ್ರೇಯಾ ವಂದಿಸಿ, ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.