ಕುಂದಾಪುರ (ಸೆಪ್ಟೆಂಬರ್ 2): ರ್ಯಾಗಿಂಗ್ ಗೆ ಐತಿಹಾಸಿಕ ಹಿನ್ನೆಲೆ ಇದೆ. ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯುದ್ಧದ ಪೂರ್ವ ತಯಾರಿಯ ಸಂದರ್ಭದಲ್ಲಿ ಆರಂಭಗೊAಡ ರ್ಯಾಗಿಂಗ್ ಪ್ರಸ್ತುತ ಶಾಲಾ-ಕಾಲೇಜುಗಳಲ್ಲಿ ವಿವಿಧ ರೂಪದಲ್ಲಿ ಕಾಣಿಸಿಕೊಂಡಿದೆ. ಮಹಿಳಾ ದೌರ್ಜನ್ಯ ಮತ್ತು ರ್ಯಾಗಿಂಗ್ ಬಗ್ಗೆ ಕಾನೂನಿನಲ್ಲಿರುವ ಮಾಹಿತಿಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ದೌರ್ಜನ್ಯ ಆದ ಸಂದರ್ಭದಲ್ಲಿ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿ ಸತೀಶ್ಚಂದ್ರ ಕಾಳವರ್ಕರ್ ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರ್ಯಾಗಿಂಗ್ ತಡೆ ಘಟಕ ಮತ್ತು ಮಹಿಳಾ ದೌರ್ಜನ್ಯ ತಡೆ ಘಟಕ ಆಯೋಜಿಸಿದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಈ ಸಂದರ್ಭ ಮಹಿಳಾ ದೌರ್ಜನ್ಯ ತಡೆ ಘಟಕದ ಸಂಯೋಜಕರಾದ ಪ್ರೀತಿ ಹೆಗ್ಡೆ, ಜಯಲಕ್ಷ್ಮಿ ಹಾಗೂ ರ್ಯಾಗಿಂಗ್ ತಡೆ ಘಟಕದ ಸಂಯೋಜಕರಾದ ವಿಲ್ಮಾ ಡಿಸೋಜ ಉಪಸ್ಥಿತರಿದ್ದರು . ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ವಂದಿಸಿದರು. ವಿದ್ಯಾರ್ಥಿನಿ ಪೂಜಾ ಅತಿಥಿಗಳನ್ನು ಪರಿಚಯಿಸಿ, ವಿದ್ಯಾರ್ಥಿನಿ ವೈಷ್ಣವಿ ಎಂ.ಎಸ್. ಕಾರ್ಯಕ್ರಮ ನಿರೂಪಿಸಿದರು.