ಕುಂದಾಪುರ (ಜೂನ್ 8) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಆಡಳಿತ ಸಿಬ್ಬಂದಿಗಳಿಗೆ “ಸ್ಕಿಲ್ ಡೆವಲಪ್ಮೆಂಟ್ ಟ್ರೈನಿಂಗ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿಯವರು ಮಾತನಾಡಿ,ಬದಲಾದ ಕಾಲಮಾನಕ್ಕೆ ನಮ್ಮ ವೃತ್ತಿ ಬದುಕಿನಲ್ಲಿಯೂ ಹೊಸ ಬದಲಾವಣೆಗಳನ್ನು ಮಾಡಿಕೊಂಡಾಗ ಮಾತ್ರ ನಾವು ಇನ್ನಷ್ಟುಬೆಳೆದು ಸುಲಭವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದರು.ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀ ಹರೀಶ್ ಕಾಂಚನ್ ಮತ್ತು ಶ್ರೀಮತಿ ಜಯಲಕ್ಷ್ಮಿಯವರು ಕಛೇರಿಯಲ್ಲಿಸಿಬ್ಬಂದಿಗಳು ದಿನನಿತ್ಯ ಉಪಯೋಗಿಸಬಲ್ಲ ಚಾಟ್ ಜಿಪಿಟಿ ಮತ್ತು ಎಕ್ಸೆಲ್ ನಂತಹ ಕಂಪ್ಯೂಟರ್ ತಂತ್ರಜ್ಞಾನಗಳನ್ನು ಸಮರ್ಪಕವಾಗಿಉಪಯೋಗಿಸುವುದರ ಕುರಿತು ಮಾಹಿತಿ ಮತ್ತು ತರಬೇತಿ ನೀಡಿದರು. ವಿಭಾಗದ ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು.ಗಣಕ ವಿಜ್ಞಾನ ಪ್ರಾಧ್ಯಾಪಕರಾದ ಶ್ರೀಕಾಂತ್ ವಂದಿಸಿ, ರಶ್ಮಿ ಗಾವಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.